ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಜನ್ ಲಾಲ್ ಶರ್ಮಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಭಜನ್ ಲಾಲ್ ಶರ್ಮಾ ಅವರು ಪಕ್ಷವನ್ನು ಬಲಪಡಿಸಲು ಕಠಿಣ ಪ್ರಯತ್ನಗಳನ್ನು ಮಾಡಿದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ.ಜನರ ಆಕಾಂಕ್ಷೆಗಳನ್ನು ಈಡೇರಿಸಲು ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು ಮೋದಿ ಹೇಳಿದ್ದಾರೆ.
ರಾಜಸ್ಥಾನದ ಬಿಜೆಪಿ ಸರ್ಕಾರವು ರಾಜ್ಯದ ಜನರ ನಂಬಿಕೆ ಮತ್ತು ಭರವಸೆಗಳನ್ನು ಈಡೇರಿಸಲು ಶ್ರಮಿಸುತ್ತದೆ ಎಂದು ಮೋದಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದು, ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ ಅವರಿಗೆ ಜನ್ಮ ದಿನದ ಶುಭಾಶಯಗಳು. ಶರ್ಮಾ ಅವರು ಹಲವು ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ, ಅವರು ರಾಜ್ಯಾದಾದ್ಯಂತ ಬಿಜೆಪಿ ಪಕ್ಷವನ್ನು ಬಲಪಡಿಸಲು ಕಠಿಣ ಪ್ರಯತ್ನಗಳನ್ನು ಮಾಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ತಮ್ಮ ಯಾತ್ರೆಯನ್ನು ಪ್ರಾರಂಭಿಸುತ್ತಿದ್ದು, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ರಾಜಸ್ಥಾನದ ಉಪಮುಖ್ಯಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಭೈರವ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದ ಮೋದಿ, ಮುಖ್ಯಮಂತ್ರಿ ಶರ್ಮಾ ಅವರ ನಾಯಕತ್ವದಲ್ಲಿ ರಾಜಸ್ಥಾನವು ಉತ್ತಮ ಆಡಳಿತ, ಸಮೃದ್ಧಿ ಮತ್ತು ಅಭಿವೃದ್ಧಿಯ ಹೊಸ ಮಾನದಂಡಗಳನ್ನು ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.