ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುವಂತೆ ಶನಿವಾರ ತಡರಾತ್ರಿ ರಾಜಸ್ಥಾನ ಸರ್ಕಾರ ಆದೇಶ ಹೊರಡಿಸಿದೆ.
ಬಿಹಾರ ತನ್ನ ಜಾತಿ ಸಮೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ರಾಜಸ್ಥಾನ ಸರ್ಕಾರವು ಈ ಆದೇಶ ನೀಡಿದೆ. ಈ ಮೂಲಕ ಜಾತಿ ಸಮೀಕ್ಷೆ ನಡೆಸುತ್ತಿರುವ ದೇಶದ ಎರಡನೇ ರಾಜ್ಯವಾಗಲಿದೆ.
ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯ ಮುನ್ನ ಈ ಆದೇಶ ಹೊರಡಿಸಲಾಗಿದೆ.
ರಾಜ್ಯ ಸಚಿವ ಸಂಪುಟದ ಅನುಮೋದನೆಯ ನಂತರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಜಾತಿ ಸಮೀಕ್ಷೆ ನಡೆಸುವ ಕುರಿತು ಆದೇಶ ಹೊರಡಿಸಲಾಗಿದೆ.
ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್ ಅವರು ಶನಿವಾರ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿ, ರಾಜಸ್ಥಾನದಲ್ಲಿಯೂ ಜಾತಿಗಣತಿ ನಡೆಸಲಾಗುವುದು. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂಬ ಹೇಳಿಕೆ ನೀಡಿದ್ದರು.
राजस्थान की कांग्रेस सरकार जाति आधारित सर्वे कराएगी।
कांग्रेस ‘जिसकी जितनी भागीदारी-उसकी उतनी हिस्सेदारी’ के अपने संकल्प पर काम कर रही है। pic.twitter.com/7z1Wb4T4LP
— Congress (@INCIndia) October 7, 2023