ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಬಂಧನಕ್ಕೆ ರಾಜಸ್ಥಾನ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸಂಜೀವನಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಇಂದು ಮಧ್ಯಂತರ ರಿಲೀಫ್ ನೀಡಿದೆ .
ಸಚಿವ ಗಜೇಂದ್ರ ಸಿಂಗ್ ಶೇಖಾವತ್ 900 ಕೋಟಿಗೂ ಹೆಚ್ಚು ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆರೋಪಿ ಎಂದು ನಮೂದಿಸದಿದ್ದರೂ ಸಚಿವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು. ಈಗಾಗಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಗುಂಪು ಪ್ರಕರಣದ ಬಗ್ಗೆ ತನಿಖೆಯನ್ನು ನಡೆಸುತ್ತಿದೆ.
ಗಜೇಂದ್ರ ಸಿಂಗ್ ಶೇಖಾವತ್ ಅವರು ಮಾರ್ಚ್ 24ರಂದು ಪ್ರಕರಣದ ಎಫ್‌ಐಆರ್ ರದ್ದುಗೊಳಿಸುವಂತೆ ಮತ್ತು ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಅರ್ಜಿ ಸಲ್ಲಿಸಿದ್ದರು.
ಗಜೇಂದ್ರ ಸಿಂಗ್ ಶೇಖಾವತ್ ರಾಜಸ್ತಾನ ಸಿಎಂ ಗೆಹ್ಲೋಟ್ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ, ರಾಜಸ್ಥಾನದ ಮುಖ್ಯಮಂತ್ರಿಗಳು ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಅದು ಅವರ ಸ್ಥಾನಕ್ಕೆ ಸರಿಯಲ್ಲ ಎಂದು ಹೇಳಿದ್ದಾರೆ.