ಪಂಜಾಬ್​ ಕಿಂಗ್ಸ್​ ವಿರುದ್ಧ ಟಾಸ್ ಗೆದ್ದು ರಾಜಸ್ಥಾನ್​ ರಾಯಲ್ಸ್​ ಬೌಲಿಂಗ್​ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್​ ರಾಯಲ್ಸ್​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.
ಉಭಯ ತಂಡಗಳು ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು.

ಇದು ಗುವಾಹಟಿಯ(Guwahati) ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ(Barsapara Cricket Stadium) ನಡೆಯುತ್ತಿರುವ ಮೊದಲ ಐಪಿಎಲ್‌ ಪಂದ್ಯವಾಗಿದೆ.
ಉಭಯ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದೆ. ಹೀಗಾಗಿ ಈ ಹೋರಾಟ ದೊಡ್ಡ ಮೊತ್ತಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಇದೆ.

ರಾಯಲ್ಸ್ ತಂಡವು ಜಾಸ್​ ಬಟ್ಲರ್, ನಾಯಕ ಸಂಜು ಸ್ಯಾಮ್ಸನ್​, ಯಶಸ್ವಿ ಜೈಸ್ವಾಲ್ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ಮೂಲಕ ಗಮನ ಸೆಳೆದಿದ್ದರು. ಬೌಲಿಂಗ್​ನಲ್ಲಿ ಅನುಭವಿ ಆರ್​. ಅಶ್ವಿನ್​ ಯಜುವೇಂದ್ರ ಚಹಲ್​​ ಮತ್ತು ಟ್ರೆಂಟ್ ಬೌಲ್ಟ್ ಅವರಂತಹ ವಿಕೆಟ್ ಟೇಕರ್ ಬೌಲರ್‌ಗಳ ಪಡೆಯೇ ಇದೆ.

ಶಿಖರ್​ ಧವನ್​ ಸಾರಥ್ಯದ ಪಂಜಾಬ್ ಕಿಂಗ್ಸ್ ಕೂಡ ಸಮರ್ಥವಾಗಿದೆ. ಭಾನುಕಾ ರಾಜಪಕ್ಸೆ, ಶಾರುಖ್ ಖಾನ್​ ಬ್ಯಾಟಿಂಗ್​ ವಿಭಾಗದ ಬಲವಾದರೆ, ಬೌಲಿಂಗ್​ನಲ್ಲಿ ಅರ್ಶ್​ದೀಪ್ ಸಿಂಗ್, ಇಂಗ್ಲೆಂಡ್​ನ ಸ್ಟಾರ್​ ಆಲ್​ರೌಂಡರ್​ ಸ್ಯಾಮ್​ ಕರನ್​​ ಕೂಡ ಉತ್ತಮ ಫಾರ್ಮ್​ನಲ್ಲಿದ್ದಾರೆ. ಇವರಿಗೆ ರಾಹುಲ್ ಚಹಾರ್ ಮತ್ತು ಸಿಕಂದರ್ ರಜಾ ಕೂಡ ಉತ್ತಮ ಸಾಥ್​ ನೀಡುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!