ರಾಜಸ್ಥಾನ್ ರಾಯಲ್ಸ್ ಗೆ ಮುಗಿಯದ ಸಂಕಷ್ಟ: ಟೂರ್ನಮೆಂಟ್‌ನಿಂದ ಔಟ್ ಆದ ನಿತೀಶ್ ರಾಣಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಕಷ್ಟಗಳ ಸರಮಾಲೆ ಶುರುವಾದಂತಿದೆ. ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿರುವ ರಾಜಸ್ಥಾನ್ ರಾಯಲ್ಸ್‌ಗೆ ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ.

ತಂಡದ ಸ್ಟಾರ್ ಆಟಗಾರ ಮತ್ತು ಎಡಗೈ ಬ್ಯಾಟ್ಸ್‌ಮನ್ ನಿತೀಶ್ ರಾಣಾ ಗಾಯದಿಂದಾಗಿ ಟೂರ್ನಮೆಂಟ್‌ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ರಾಜಸ್ಥಾನ್ ರಾಯಲ್ಸ್ ದಕ್ಷಿಣ ಆಫ್ರಿಕಾದ ಯುವ ಆಟಗಾರ ಲುವಾನ್-ಡ್ರೆ ಪ್ರಿಟೋರಿಯಸ್ ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದ್ದಾರೆ.

ರಾಣಾ ಅವರ ಫಾರ್ಮ್ ಮತ್ತು ಅನುಭವವು ತಂಡದ ಬ್ಯಾಟಿಂಗ್ ವಿಭಾಗಕ್ಕೆ ಬಲವಾಗಿತ್ತು, ಮತ್ತು ಅವರ ಅನುಪಸ್ಥಿತಿಯು ತಂಡದ ಕಾರ್ಯತಂತ್ರದ ಮೇಲೆ ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ.

ನಿತೀಶ್ ರಾಣಾ ಅವರ ಬದಲಿಯಾಗಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೇರಿರುವ ಲುವಾನ್-ಡ್ರೆ ಪ್ರಿಟೋರಿಯಸ್ ದಕ್ಷಿಣ ಆಫ್ರಿಕಾದ ಉದಯೋನ್ಮುಖ ಆಟಗಾರರಾಗಿದ್ದಾರೆ. 19 ವರ್ಷದ ಈ ಎಡಗೈ ಆಟಗಾರನಿಗೆ ಬೌಲಿಂಗ್ ಮಾಡುವ ಸಾಮರ್ಥ್ಯವೂ ಇದ್ದು, ದಕ್ಷಿಣ ಆಫ್ರಿಕಾದ T20 ಲೀಗ್ SA20ನಲ್ಲಿ ಪಾರ್ಲ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!