ರಾಜಸ್ಥಾನ ‌ವಿಧಾನಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಬಿತ್ತು ತೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನ ‌ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಸಂಜೆ ಕೊನೆಗೊಂಡಿತು. ನವೆಂಬರ್ 25 ರಂದುಮತದಾನ ನಡೆಯಲಿದೆ

ಆಡಳಿತಾರೂಢ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರದಲ್ಲಿ ಮುಖ್ಯವಾಗಿ ಅಶೋಕ್ ಗೆಹಲೋತ್‌ ಸರ್ಕಾರದ ಯೋಜನೆಗಳ ಮೇಲೆ ಕೇಂದ್ರೀಕರಿಸಿದ್ದು, ಈ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರೆ ಏಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಹಿತ ಪ್ರಮುಖರು ಕಾಂಗ್ರೆಸ್‌ ಪರ ಪ್ರಚಾರ ನಡೆಸಿದ್ದಾರೆ.

ಇತ್ತ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಚುನಾವಣಾ ಪ್ರಚಾರದ ನೇತೃತ್ವ ವಹಿಸಿದ್ದು, ಬಿಕಾನೇರ್‌ ಮತ್ತು ಜೈಪುರದಲ್ಲಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿಗೆ ಅಮಿತ್ ಶಾ , ಯೋಗಿ, ಮೊದಲಾದವರು ಸಾಥ್ ನೀಡಿದ್ದಾರೆ.

ರಾಜಸ್ಥಾನದಲ್ಲಿ ಒಟ್ಟು 200 ವಿಧಾನಸಭಾ ಕ್ಷೇತ್ರಗಳಿವೆ. ಶ್ರೀಗಂಗಾನಗರದ ಕರಣ್‌ಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೊನೂರ್ ನಿಧನರಾದ ಹಿನ್ನೆಲೆ 199 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 199 ವಿಧಾನಸಭಾ ಕ್ಷೇತ್ರಗಳಲ್ಲಿ 5,25,38,105 ಮತದಾರರಿದ್ದಾರೆ.

ಶನಿವಾರ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಡಿ.3 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!