ಐಪಿಎಲ್ ನಲ್ಲಿ ಇಂದು ರಾಜಸ್ಥಾನ, ಲಖನೌ ಮುಖಾಮುಖಿ: ಟಾಸ್ ಗೆದ್ದ ಸಂಜು ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ರಾಜಸ್ಥಾನ ರಾಯಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದೆ. ರಾಜಸ್ಥಾನ ರಾಯಲ್ಸ್ ಟಾಸ್ ಗೆದ್ದುಕೊಂಡು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ರಾಜಸ್ಥಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆ್ಯಡಮ್ ಜಂಪಾ ಬದಲು ಜೇಸನ್ ತಂಡ ಸೇರಿಕೊಂಡಿದ್ದಾರೆ.

ರಾಜಸ್ಥಾನ ರಾಯಲ್ಸ್
ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ), ರಿಯಾನ್ ಪರಾಗ್, ಶಿಮ್ರೊನ್ ಹೆಟ್ಮೆಯರ್, ಧ್ರುವ್ ಜುರೆಲ್, ಆರ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೋಲ್ಟ್, ಸಂದೀಪ್ ಶರ್ಮಾ, ಯುಜುವೇಂದ್ರ ಚಹಾಲ್

ಲಖನೌ ಸೂಪರ್ ಜೈಂಟ್ಸ್
ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡ, ಮಾರ್ಕಸ್ ಸ್ಟೊಯ್ನಿಸ್, ಕ್ರುನಾಲ್ ಪಾಂಡ್ಯ, ನಿಕೋಲಸ್ ಪೂರನ್, ಆಯುಷ್ ಬದೋನಿ, ನವೀನ್ ಉಲ್ ಹಕ್, ಅವೇಶ್ ಖಾನ್, ಯುಧ್ವೀರ್ ಸಿಂಗ್ ಚರಕ್, ರವಿ ಬಿಶ್ನೋಯ್

ರಾಜಸ್ಥಾನ ರಾಯಲ್ಸ್ ಆಡಿದ 5 ಪಂದ್ಯದಲ್ಲಿ 4ರಲ್ಲಿ ಗೆಲುವು ದಾಖಲಿಸಿ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ ಕೇವಲ ಒಂದು ಸೋಲು ಕಂಡಿದೆ. ಇನ್ನು ಲಖನೌ ಸೂಪರ್ ಜೈಂಟ್ಸ್ ಆಡಿದ 5 ಪಂದ್ಯದಲ್ಲಿ 3 ಗೆಲುವು ದಾಖಲಿಸಿ 2ನೇ ಸ್ಥಾನದಲ್ಲಿದೆ. ಅಗ್ರಸ್ಥಾನದಲ್ಲಿರುವ ಈ ತಂಡಗಳ ಹೋರಾಟ ಈಗಾಗಲೇ ತೀವ್ರ ಕುತೂಹಲ ಕೆರಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!