ರಾಜಸ್ಥಾನಕ್ಕೆ ಇಂದು ಸಿಗಲಿದೆ ನೂತನ ಮುಖ್ಯಮಂತ್ರಿ: ಭಜನ್​ ಲಾಲ್​ ಶರ್ಮಾ ಪ್ರಮಾಣವಚನಕ್ಕೆ ಕ್ಷಣಗಣನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ ಲಾಲ್​ ಶರ್ಮಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದ್ದು, ಈಗಾಗಲೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಜನ್​ ಲಾಲ್​ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಭಜನ್​ ಲಾಲ್ ಶರ್ಮಾ ಅವರು ಶುಕ್ರವಾರದಂದು ರಾಜ್ಯದ 16 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ಉಪಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಪ್ರೇಮ್​ಚಂದ್​ ಭೈರವಾ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜೈಪುರದ ರಾಮ್​ನಿವಾಸ್​ ಭಾಗ್​ನ ಅಲ್ಬರ್ಟ್​ ಹಾಲ್​ನಲ್ಲಿ ಶುಕ್ರವಾರ ಮಧ್ಯಾಹ್ನ 12.15ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯದ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಪದಗ್ರಹಣ ಸಮಾರಂಭದ ಹಿನ್ನೆಲೆ ಅಲ್ಬರ್ಟ್​ ಹಾಲ್​ನಲ್ಲಿ ಭರದ ಸಿದ್ಧತೆಯನ್ನು ನಡೆಸಲಾಗಿದೆ. ಈಗಾಗಲೇ ಸಮಾರಂಭದ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಅಲ್ಬರ್ಟ್​ ಹಾಲ್​ ಸಂಪೂರ್ಣ ಕೆಸರೀಮಯವಾಗಿದೆ. ಸ್ಥಳದಲ್ಲಿ ಗಣ್ಯರಿಗೆ ಮತ್ತು ಆಹ್ವಾನಿತರಿಗೆ ವಿಶೇಷ ಆಸನದ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!