ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಹ್ಲಿ ಹಾಗೂ ರಜತ್ ಪಾಟೀದಾರ್ ಜೊತೆಯಾಟದಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ 221 ರನ್ ಸಿಡಿಸಿದೆ.
ಜೊತೆಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 13000 ರನ್ ಪೂರೈಸಿದ್ದಾರೆ. ಈ ಮೂಲಕ ದಿಗ್ಗಜರ ಸಾಲಿನಲ್ಲಿ ಕಾಣಿಸಿಕೊಂಡಿದ್ದಾರೆ. 13 ಸಾವಿರ ರನ್ ಗಡಿ ದಾಟಿದ 5ನೇ ಕಿಕೆಟಿಗ ಅನ್ನೋ ದಾಖಲೆ ಬರೆದಿದ್ದಾರೆ.
ಆರ್‌ಸಿಬಿಯ ಫಿಲಿಪ್ ಸಾಲ್ಟ್ ಕೇವಲ 4 ರನ್ ಸಿಡಿಸಿ ನಿರ್ಗಮಿಸಿದರು. ಬಳಿಕ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಜೊತೆಯಾಟ ಆರ್‌ಸಿಬಿ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಎರಡನೇ ವಿಕೆಟ್‌ಗೆ ಈ ಜೋಡಿ 91 ರನ್ ಜೊತೆಯಾಟ ನೀಡಿತ್ತು. ಇದರಿಂದ ಆರ್‌ಸಿಬಿ ಬೃಹತ್ ಮೊತ್ತದ ಸೂಚನೆ ನೀಡಿತು.
ಇತ್ತ ದೇವದತ್ ಪಡಿಕ್ಕಲ್ 37 ರನ್ ಸಿಡಿಸಿ ನಿರ್ಗಮಿಸಿದರು. ಬಳಿಕ ಒಂದಾದ ಕೊಹ್ಲಿ ಹಾಗೂ ರಜತ್ ಪಾಟೀದಾರ್ ಜೊತೆಯಾಟ ಆರಂಭಗೊಂಡಿತು. ಇದರ ನಡುವೆ ಕೊಹ್ಲಿ 67 ರನ್ ಸಿಡಿಸಿ ನಿರ್ಗಮಿಸಿದರು. ಲಿಯಾಮ್ ಲಿವಿಂಗ್ ಸ್ಟೋನ್ ನಿರಾಸೆ ಅನುಭವಿಸಿದರು. ರಜತ್ ಪಾಟೀದಾರ್ 32 ಎಸೆತದಲ್ಲಿ 64 ರನ್ ಸಿಡಿಸಿದರು. ಈ ಮೂಲಕ ಆರ್‌ಸಿಬಿ 200 ರ್ ಗಡಿ ದಾಡಿತ್ತು. ಇತ್ತ ಜಿತೇಶ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಜಿತೇಶ್ ಶರ್ಮಾ ಅಜೇಯ 40 ರನ್ ಸಿಡಿಸಿದರು. ಆರ್‌ಸಿಬಿ 5 ವಿಕೆಟ್ ನಷ್ಟಕ್ಕೆ 221 ರನ್ ಸಿಡಿಸಿತು.