ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ 23ನೇ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಎಂ.ಎ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ವಿಶೇಷವೆಂದರೆ, ಈ ಪಂದ್ಯದಲ್ಲಿ ಆರ್‌ಸಿಬಿ ನಾಯಕ ರಜತ್ ಪಾಟಿದರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ತವರು ಮೈದಾನದ ಪ್ರೇಕ್ಷಕರ ಬೆಂಬಲದೊಂದಿಗೆ ಕಣಕ್ಕಿಳಿಯುತ್ತಿರುವ ಬೆಂಗಳೂರು ತಂಡಕ್ಕೆ ಇದೊಂದು ಪ್ರತಿಷ್ಠೆಯ ಹೋರಾಟವಾಗಿದೆ. ಏಕೆಂದರೆ, ಇದುವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ತಂಡವನ್ನು ಸೋಲಿಸಲು ಆರ್‌ಸಿಬಿಗೆ ಸಾಧ್ಯವಾಗಿಲ್ಲ.
ಹಳೆಯ ಕಹಿ ನೆನಪುಗಳನ್ನು ಮರೆತು, ಲಕ್ನೋ ವಿರುದ್ಧ ತನ್ನದೇ ನೆಲದಲ್ಲಿ ಮೊದಲ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಲು ಆರ್‌ಸಿಬಿ ಪಡೆ ತುದಿಗಾಲಿನಲ್ಲಿ ನಿಂತಿದೆ. ಬೌಲರ್‌ಗಳು ಲಕ್ನೋ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದರೆ, ಆರ್‌ಸಿಬಿ ಬ್ಯಾಟರ್‌ಗಳಿಗೆ ತವರಿನಲ್ಲಿ ಚೊಚ್ಚಲ ಗೆಲುವು ಅಸಾಧ್ಯವೇನಲ್ಲ.



