ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಗೆ ರಾಜಾತಿಥ್ಯದ ಪೋಟೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಈಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಎನ್ನುವಂತೆ ನಟ ದರ್ಶನ್ ಗೆ ರಾಜಾತಿಥ್ಯದ ಮತ್ತೊಂದು ಪೋಟೋ ಸಿಕ್ಕಿರುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದ ಸಂಬಂಧ ಮತ್ತೊಂದು ಪೋಟೋ ಸಿಕ್ಕಿರುವುದಾಗಿ ತಿಳಿಸಿದರು.
ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಸಂಬಂಧ ಈಗಾಗಲೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎರಡು ಕೇಸ್ ದಾಖಲಾಗಿದೆ. ಇದಲ್ಲದೇ ಜೈಲು ಅಧಿಕಾರಿಗಳ ವಿರುದ್ಧವೂ ಒಂದು ಕೇಸ್ ದಾಖಲಾಗಿದೆ. ಈ ಮೂರು ಪ್ರಕರಣಗಳ ತನಿಖೆಯನ್ನು ನ್ಯಾಯಾಲಯದ ಅನುಮತಿ ಪಡೆದು ಹಿರಿಯ ಅಧಿಕಾರಿಗಳಿಂದ ನಡೆಸಲಾಗುತ್ತಿದೆ ಎಂದು ಹೇಳಿದರು.