ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಕಾಫಿ ಕುಡಿಯುತ್ತಿರುವುದು ಹಾಗೂ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗುತ್ತಿದ್ದಂತೆ ಸುಮೋಟೋ ಅಂದ್ರೆ ಸ್ವಯಂ ಪ್ರೇರಿತ ದೂರು ದಾಖಲು ಆಗಿದೆ. ಈ ಮೂಲಕ ತನಿಖೆಗೆ ಜೈಲಾಧಿಕಾರಿಗಳು ಮುಂದಾಗಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಪ್ರಕರಣದ ಕುರಿತಂತೆ ತನಿಖೆಗೆ ಆದೇಶಿಸಿದ್ದಾರೆ.
ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಅವರು ಇದೀಗ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಇಲ್ಲಿ ಜೈಲಾಧಿಕಾರಿಗಳ ಕರ್ತವ್ಯ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ. ಆದ್ದರಿಂದಾಗಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಕಾರಾಗೃಹದ ಇಲಾಖೆ ಮೇಲಾಧಿಕಾರಿಗಳಿಂದ ತನಿಖೆ ಮಾಡಿ ವರದಿ ನೀಡುವಂತೆ ಈಗಾಗಲೇ ಮೌಖಿಕ ಸೂಚನೆ ನೀಡಲಾಗಿದೆ. ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಜೈಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದಾರೆ.