ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್‌ಗೆ ರಾಜಾಥಿತ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಗಾರ್ಡನ್ ನಾಗನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಆದೇಶ ಪ್ರಕಟಿಸಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾಥಿತ್ಯ ಕೊಟ್ಟಿದ್ದ ಆರೋಪ ವಿಲ್ಸನ್ ಗಾರ್ಡನ್ ನಾಗನ ಮೇಲಿತ್ತು. ನಾಗನ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.
ವಿಲ್ಸನ್ ಗಾರ್ಡನ್ ನಾಗ ಸೇರಿ ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ.