ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ಲೀಗಲ್ ನೊಟೀಸ್ ನೀಡಿದ ರಾಜೀವ್‌ ಚಂದ್ರಶೇಖರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಲೀಗಲ್ ನೊಟೀಸ್ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಮುಖ ಮತದಾರರಿಗೆ, ಪ್ರಭಾವಿ ವ್ಯಕ್ತಿಗಳಿಗೆ ಲಂಚ ನೀಡುತ್ತಿದ್ದಾರೆ ಎಂದು ತರೂರ್‌ ಅವರು ಸುಳ್ಳು ಮಾಹಿತಿ ಹರಡುತ್ತಿದ್ದಾರೆ. ತರೂರ್‌ ಅವರ ಹೇಳಿಕೆಯಿಂದ ನನ್ನ ಪ್ರತಿಷ್ಠೆಗೆ ಧಕ್ಕೆಯುಂಟಾಗಿದೆ. ತಿರುವನಂತಪುರದ ಕ್ರಿಶ್ಚಿಯನ್‌ ಸಮುದಾಯ ಮತ್ತು ಅದರ ಪ್ರಮುಖ ನಾಯಕರಿಗೆ ಅವಮಾನ ಮಾಡಿದ್ದಾರೆ. ಬಿಜೆಪಿಯ ಪ್ರಚಾರಕ್ಕೆ ಹಾನಿ ಮಾಡಿ ಲಾಭ ಪಡೆದುಕೊಳ್ಳುವ ಉದ್ದೇಶ ಹೊಂದಿದ್ದಾರೆ ಎಂದು ಚಂದ್ರಶೇಖರ್‌ ಆರೋಪಿಸಿದ್ದಾರೆ.

ಚಂದ್ರಶೇಖರ್ ವಿರುದ್ಧ ಮಾಡಲಾದ ಎಲ್ಲಾ ಆರೋಪಗಳನ್ನು ತಕ್ಷಣ ಹಿಂಪಡೆಯಬೇಕು. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಚಂದ್ರಶೇಖರ್‌ ಅವರಿಗೆ ಬೇಷರತ್ ಕ್ಷಮೆಯಾಚಿಸಬೇಕು. ಜತೆಗೆ ಮುಂದೆಂದೂ ಅವರ ವಿರುದ್ಧ ಮಾನಹಾನಿಯಂತಹ ಹೇಳಿಕೆಗಳನ್ನು ನೀಡಬಾರದು ಎಂದು ಲೀಗಲ್ ನೊಟೀಸ್ ನಲ್ಲಿ ತಿಳಿಸಲಾಗಿದೆ.

ನೊಟೀಸ್ ಸ್ವೀಕರಿಸಿದ 24 ಗಂಟೆಗಳ ಒಳಗೆ ಷರತ್ತುಗಳನ್ನು ಸ್ವೀಕರಿಸಲು ವಿಫಲವಾದರೆ ನ್ಯಾಯಾಲಯದಲ್ಲಿ ಕ್ರಿಮಿನಲ್ ಮತ್ತು ಸಿವಿಲ್ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!