ಕೇರಳ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ನೇಮಕ?

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಅವರು ಬಿಜೆಪಿ ಕೇರಳ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಾಜೀವ್ ಚಂದ್ರಶೇಖರ್ ಭಾನುವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರ ಆಯ್ಕೆ ಖಚಿತಗೊಂಡಿದೆ.

ಈ ಮಧ್ಯೆ ಭಾನುವಾರ ಬೆಳಗ್ಗೆ ತಿರುವನಂತಪುರದಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ಈ ಸಂಬಂಧ ಅಧಿಕೃತ ದೃಢೀಕರಣವನ್ನು ಮಾಡಲಾಯಿತು. ಮಾ.24ರಂದು ಬೆಳಗ್ಗೆ 10 ಗಂಟೆಗೆ ತಿರುವನಂತಪುರದ ಉದಯ್ ಪ್ಯಾಲೇಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ಜರಗಲಿರುವ ಬಿಜೆಪಿ ರಾಜ್ಯ ಮಂಡಳಿ ಸಭೆಯಲ್ಲಿ ರಾಜೀವ್ ಚಂದ್ರಶೇಖರ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು.

ಕರ್ನಾಟಕದಿಂದ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ರಾಜೀವ್ ಚಂದ್ರಶೇಖರ್ ಅವರು ಎರಡನೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದಲ್ಲಿ ಐಟಿ, ಕೌಶಲ್ಯ ಅಭಿವೃದ್ಧಿ ಮತ್ತು ಇಲೆಕ್ಟ್ರಾನಿಕ್ಸ್ ಸಚಿವಾಲಯದ ರಾಜ್ಯ ಸಚಿವರಾಗಿದ್ದರು.

ಕಳೆದ ಎರಡು ದಶಕಗಳಿಂದ ಬಿಜೆಪಿಯಲ್ಲಿರುವ ರಾಜೀವ್ ಚಂದ್ರಶೇಖರ್ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರದಿಂದ ಅಭ್ಯರ್ಥಿಯಾಗಿದ್ದರು. ಶಶಿ ತರೂರ್ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತರೂ ಈ ಚುನಾವಣಾ ಹೋರಾಟವು ಅವರಿಗೆ ಕೇರಳ ರಾಜ್ಯ ರಾಜಕೀಯಕ್ಕೆ ಹೊಸ ಎಂಟ್ರಿ ಕೊಡುವಲ್ಲಿ ಯಶಸ್ವಿಯಾಯಿತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!