ಗೆಳೆಯ ದ್ವಾರಕೀಶ್ ನಿಧನಕ್ಕೆ ರಜನಿಕಾಂತ್ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ರಜನಿಕಾಂತ್ (Rajinikanth) ಸಂತಾಪ ಸೂಚಿಸಿದ್ದಾರೆ.

ದ್ವಾರಕೀಶ್ (Dwarakish) ಮತ್ತು ರಜನಿಕಾಂತ್ (Rajinikanth) ಬಹುಕಾಲದ ಗೆಳೆಯರು. ದ್ವಾರಕೀಶ್ ಹೇಳಿದವರಿಗೆ ರಜನಿಕಾಂತ್ ಕಾಲ್ ಶೀಟ್ ಕೊಡುತ್ತಿದ್ದರು ಎಂದು ಸ್ವತಃ ದ್ವಾರಕೀಶ್ ಅವರೇ ಹೇಳಿದ್ದಾರೆ. ಅಡ್ಡ ವಾರಿಸು ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದರೆ, ಈ ಸಿನಿಮಾವನ್ನು ದ್ವಾರಕೀಶ್ ನಿರ್ಮಾಣ ಮಾಡಿದ್ದರು. 1983ರಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು. ಆನಂತರ ನೀ ಬರೆದ ಕಾದಂಬರಿ, ಗುಂಗುವಾ ಸೇರಿದಂತೆ ಹಲವು ಚಿತ್ರಗಳಲ್ಲಿ ಇಬ್ಬರೂ ಕೆಲಸ ಮಾಡಿದ್ದಾರೆ.

ತಮ್ಮಿಬ್ಬರ ಸ್ನೇಹವನ್ನು ರಜನಿಕಾಂತ್ ನೆನಪಿಸಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ರಜನಿ, ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೀಶ್ ಅವರ ನಿಧನ ನನಗೆ ಅತೀ ನೋವನ್ನು ತಂದಿದೆ. ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ, ಆನಂತರ ದೊಡ್ಡ ನಿರ್ಮಾಪಕರು ಹಾಗೂ ನಿರ್ದೇಶಕರಾಗಿ ಬೆಳೆದರು ಹಾಗೂ ಬೆಳೆಸಿದರು. ಅವರ ಅಗಲಿಕೆ ನೋವು ತಂದಿದೆ. ಅವರಿಗೆ ಭಾವ ಪೂರ್ಣ ಸಂತಾಪ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!