ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.