ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ತಮನ್ನಾ, ಕನ್ನಡದ ಸ್ಟಾರ್ ಹೀರೋ ಶಿವರಾಜ್ ಕುಮಾರ್, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್, ಜಾಕಿ ಶ್ರಾಫ್, ಸುನೀಲ್ ಮುಂತಾದ ಸ್ಟಾರ್ ನಟರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಜೈಲರ್ ಮೊದಲ ದಿನವೇ ವಿಶ್ವಾದ್ಯಂತ 95 ಕೋಟಿ ಕಲೆಕ್ಷನ್ ಮಾಡಿದೆ. ಎರಡನೇ ದಿನ ಒಟ್ಟು 56 ಕೋಟಿ ರೂ. ಜೈಲರ್ ಸಿನಿಮಾ ಮೂರನೇ ದಿನ 68 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ.
ಇದರೊಂದಿಗೆ ಜೈಲರ್ ಚಿತ್ರ ಮೂರು ದಿನಗಳಲ್ಲಿ ವಿಶ್ವದಾದ್ಯಂತ 220 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಅಂದರೆ ಸುಮಾರು 110 ಕೋಟಿ ಶೇರ್ ಕಲೆಕ್ಷನ್ ಮಾಡಿದೆ. ಜೈಲರ್ ಚಿತ್ರ ಈಗಾಗಲೇ ಹಲವೆಡೆ ಬ್ರೇಕ್ ಈವ್ ಮಾಡಿ ಲಾಭ ಗಳಿಸುತ್ತಿದೆ. ಇಂದು ಭಾನುವಾರ ರಜಾದಿನವಾಗಿದೆ, ಇಂದೂ ಹೆಚ್ಚಿನ ಕಲೆಕ್ಷನ್ ಆಗುವ ನಿರೀಕ್ಷೆಯಲ್ಲಿದೆ ಚಿತ್ರತಂಡ. ಇದೇ ಜೋರು ಮುಂದುವರೆದರೆ ಜೈಲರ್ ವಾರದಲ್ಲಿ 500 ಕೋಟಿ ಕಲೆಕ್ಷನ್ ಮಾಡಿದರೂ ಆಶ್ಚರ್ಯ ಪಡಬೇಕಿಲ್ಲ.