ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂಪರ್ ಸ್ಟಾರ್ ರಜನಿಕಾಂತ್ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಭಾರತ ಮಾತ್ರವಲ್ಲದೆ ಜಪಾನ್, ಮಲೇಷಿಯಾ ದೇಶಗಳಲ್ಲೂ ರಜನಿಕಾಂತ್ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅಲ್ಲಿನ ಜನರಷ್ಟೇ ಅಲ್ಲ, ಅಧಿಕಾರಿಗಳು ಕೂಡ ರಜನಿಕಾಂತ್ ಅವರನ್ನು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರನ್ನು ರಜನಿಕಾಂತ್ ಭೇಟಿಯಾಗಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ರಜನಿಕಾಂತ್ ಇತ್ತೀಚೆಗೆ ಮಲೇಷ್ಯಾಕ್ಕೆ ಹೋಗಿದ್ದು, ಪ್ರಧಾನಿ ಕಚೇರಿಯಲ್ಲಿ ಅನ್ವರ್ ಇಬ್ರಾಹಿಂ ಅವರನ್ನು ಭೇಟಿ ಮಾಡಿದರು. ಇವರಿಬ್ಬರ ಭೇಟಿ ಬಗ್ಗೆ ಅನ್ವರ್ ಇಬ್ರಾಹಿಂ ವಿಶೇಷ ಟ್ವೀಟ್ ಕೂಡ ಮಾಡಿದ್ದಾರೆ. “ವಿಶ್ವದಾದ್ಯಂತ ಹಲವಾರು ಅಭಿಮಾನಿಗಳನ್ನು ಹೊಂದಿರುವ ರಜನಿಕಾಂತ್ ಅವರನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗಿದೆ. ನಾನು ಜನರಿಗೆ ನೀಡಿದ ಸೇವೆಯನ್ನು ಶ್ಲಾಘಿಸಿದರು” ಎಂದು ಬರೆದುಕೊಂಡಿದ್ದಾರೆ.
ರಜನಿಕಾಂತ್ ಅವರು ಮಲೇಷ್ಯಾ ಪ್ರಧಾನಿಯನ್ನು ಭೇಟಿಯಾಗುತ್ತಿರುವುದು ಇದೇ ಮೊದಲಲ್ಲ. 2017ರಲ್ಲಿ ಅವರು ಅಂದಿನ ಪ್ರಧಾನಿ ನಜೀಬ್ ರಜಾಕ್ ಅವರನ್ನು ಭೇಟಿ ಮಾಡಿದ್ದರು.