ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ 79ನೇ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಭಾನುವಾರ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇಂದು ಬೆಳಗ್ಗೆ ಸೋನಿಯಾ ಗಾಂಧಿ ದೆಹಲಿಯ ‘ವೀರ ಭೂಮಿ’ಯಲ್ಲಿರುವ ರಾಜೀವ್ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಬಳಿಕ ರಾಜೀವ್ ಗಾಂಧಿ ಅವರ ಪುತ್ರಿ ಪ್ರಿಯಾಂಕ ಗಾಂಧಿಯವರು ಪುಷ್ಪ ನಮನ ಸಲ್ಲಿಸಿದರು.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರು ಪುಷ್ಪ ನಮನ ಸಲ್ಲಿಸಿದರು.