ಹೊಸದಿಗಂತ ವರದಿ, ರಾಮನಗರ:
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.
ಇದೇ ವೇಳೆ ಪೊಲೀಸ್, ಎನ್‌ಸಿಸಿ ತಂಡಗಳಿಂದ ಪಥ ಸಂಚಲನ ನಡೆಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯನ್ನು ಮಾರ್ಚ್ ನಲ್ಲಿ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.