Tuesday, January 27, 2026
Tuesday, January 27, 2026
spot_img

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡಗೆ ಜೈಲೇ ಗತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಮಂಗಳವಾರ ಜೈಲು ಪಾಲಾಗಿದ್ದು, ಜೆಎಂಎಫ್​ಸಿ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್​ ಗೌಡ ಅವರನ್ನು ನಿನ್ನೆ ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಇಂದು ಆರೋಪಿಯನ್ನು ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದರು.

ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರು, ಹೆಚ್ಚಿನ ತನಿಖೆಗಾಗಿ ಆರೋಪಿ ರಾಜೀವ್ ಗೌಡ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡುವಂತೆ ವಾದಿಸಿದರು. ಇತ್ತ ಜಾಮೀನಿಗಾಗಿ ಆರೋಪಿ ಪರ ವಕೀಲರು ಕೂಡ ವಾದ ಮಂಡಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !