ಇಂದು ಪ್ರಧಾನಿ ಮೋದಿಯಿಂದ ರಾಜ್‌ಕೋಟ್ ವಿಮಾನ ನಿಲ್ದಾಣ ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಪ್ರಧಾನಿ ಮೋದಿ ರಾಜಸ್ಥಾನ ಹಾಗೂ ಗುಜರಾತ್‌ಗೆ ಭೇಟಿ ನೀಡಲಿದ್ದು, ರಾಜ್‌ಕೋಟ್ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ.

ರಾಜ್‌ಕೋಟ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಇದರ ಜತೆಗೆ 860 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ರಾಜಸ್ಥಾನದ ಸಿಕಾರ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ಜತೆಗೆ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸುಮಾರು 17,000 ಕೋಟಿ ರೂಪಾಯಿಗಳ 14ನೇ ಕಂತು ಮೊತ್ತವನ್ನು 8.5ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!