Saturday, January 28, 2023

Latest Posts

ರಾಜೌರಿಯ ಉಗ್ರರ ದಾಳಿಯ ತನಿಖೆ ಎನ್ಐಎ ಹೆಗಲಿಗೆ: ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಉಗ್ರರ ದಾಳಿಯ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಕೇಂದ್ರ ಸರಕಾರ ಈ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಿದೆ.

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಏಜೆನ್ಸಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಭದ್ರತಾ ಪರಿಶೀಲನಾ ಸಭೆ ನಡೆಸಿದರು. ಶಾ, ಭದ್ರತೆಯನ್ನು ಬಲಪಡಿಸುವುದು ಹೇಗೆ ಎಂದು ನಾವು ಚರ್ಚಿಸಿದ್ದೇವೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗುವುದುಮತ್ತು ಭವಿಷ್ಯದಲ್ಲಿ ಯಾವುದೇ ಘಟನೆ ತಡೆಯಲು ಭದ್ರತಾ ಏಜೆನ್ಸಿಗಳು ಸಿದ್ಧಗೊಳ್ಳುತ್ತಿದೆ ಎಂದರು.

ಕಳೆದ ಒಂದೂವರೆ ವರ್ಷಗಳಲ್ಲಿ ಜಮ್ಮುವಿನಲ್ಲಿ ನಡೆದ ಎಲ್ಲಾ ಭಯೋತ್ಪಾದಕ ಘಟನೆಗಳನ್ನು ಎನ್ಐಎ ತನಿಖೆ ನಡೆಸಲಿದೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತನಿಖೆಯಲ್ಲಿ ಸಕ್ರಿಯವಾಗಿ ಸಹಾಯ ಮಾಡಲಿದ್ದಾರೆ ಎಂದರು.

ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಉಗ್ರರನ್ನು ಹಿಮ್ಮೆಟ್ಟಿಸಲು ಸಿದ್ಧರಿರುವುದಾಗಿ ಅವರು ತಿಳಿಸಿರುವುದಾಗಿ ಅಮಿತ್ ಶಾ ಹೇಳಿದರು.

ಜನವರಿ 1 ಮತ್ತು 2 ರಂದು ರಜೌರಿಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದರೆ 14 ಜನರು ಗಾಯಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!