ರಜೌರಿ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಮತ್ತೋರ್ವ ಬಲಿ, ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಜೌರಿ ಜಿಲ್ಲೆಯ ಧಂಗ್ರಿ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿದೆ. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ನಾಗರಿಕ ಇಂದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ಮೃತರನ್ನು ಪ್ರಿನ್ಸ್ ಎಂದು ಗುರುತಿಸಲಾಗಿದ್ದು, ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಭಾನುವಾರ ಸಂಜೆ ಮತ್ತು ಸೋಮವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಅಪ್ಪರ್ ಧಂಗ್ರಿ ಗ್ರಾಮದಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ನಾಗರಿಕರು ಸಾವನ್ನಪ್ಪಿ, ಅನೇಕರು ಗಾಯಗೊಂಡಿದ್ದಾರೆ.
ಏತನ್ಮಧ್ಯೆ, ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಭಾರತೀಯ ಸೇನೆ ಭಾನುವಾರ ತಿಳಿಸಿದೆ.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ, ಭಾರತೀಯ ಸೇನೆ ಬಾಲಾಕೋಟ್ (ಜಿಲ್ಲೆ ಪೂಂಚ್) ನಲ್ಲಿ ಗಡಿ ಬೇಲಿಯ ಮುಂದೆ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾಗಿ ಭಾರತೀಯ ಸೇನೆ ತಿಳಿಸಿದೆ.
ಪ್ರದೇಶವನ್ನು ಸುತ್ತುವರಿಯಲಾಗಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಯೋಧರನ್ನು ನಿಯೋಜಿಸಲಾಗಿದೆ. ಜನವರಿ 1 ರಂದು ನಡೆದ ಹತ್ಯೆಯ ನಂತರ, ಧಂಗ್ರಿ ಗ್ರಾಮದ ಸ್ಥಳೀಯರು ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲು ಪಡೆಗಳನ್ನು ನಿಯೋಜಿಸಲು ಒತ್ತಾಯಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!