ರಜೌರಿ ಉಗ್ರ ದಾಳಿ: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ, ನೌಕರಿ ಘೋಷಿಸಿದ ಲೆಫ್ಟಿನೆಂಟ್ ಗವರ್ನರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ನಾಗರಿಕರ ಸಂಬಂಧಿಕರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಮತ್ತು ಸರ್ಕಾರಿ ನೌಕರಿ ನೀಡುವುದಾಗಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಘೋಷಿಸಿದ್ದಾರೆ.

ರಜೌರಿ ಜಿಲ್ಲೆಯಲ್ಲಿ ಭಾನುವಾರ ನಡೆದ ಉಗ್ರ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ಮೃತಪಟ್ಟ ವ್ಯಕ್ತಿಯೊಬ್ಬರ ಮನೆ ಬಳಿ ಸಂಭವಿಸಿದ ಐಇಡಿ ಸ್ಫೋಟದಲ್ಲಿ ಮಗುವೊಂದು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಈ ಘೋರ ಘಟನೆಯನ್ನು ಖಂಡಿಸಿದ ಲೆಫ್ಟಿನೆಂಟ್ ಗವರ್ನರ್,ಜೌರಿಯಲ್ಲಿ ನಡೆದ ಹೇಡಿತನದ ಭಯೋತ್ಪಾದನಾ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ದಾಳಿಕೋರರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!