ರಜೌರಿಯಲ್ಲಿ ಭಯೋತ್ಪಾದಕರ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯಲ್ಲಿ ಇಂದು (ಗುರುವಾರ) ಬೆಳಗ್ಗೆ ಸೇನಾ ನೆಲೆ ಮೇಲೆ ದಾಳಿ ನಡೆಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಈ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ರಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್‌ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ಯಾರೋ ದಾಟಲು ಯತ್ನಿಸಿದ್ದಾರೆ ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ. ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಗಾಯಗೊಂಡ ಸೇನಾ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.  ದರ್ಹಾಲ್ ಪೊಲೀಸ್ ಠಾಣೆಯಿಂದ 6 ಕಿ.ಮೀ ವರೆಗೂ ಹೆಚ್ಚುವರಿ ಸೇನೆ ನಿಯೋಜನೆ ಮಾಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!