‘ರಾಜ್ಯ’ ಅಖಾಡಕ್ಕೆ ಮತ್ತೊಮ್ಮೆ ಬರ್ತಿದ್ದಾರೆ ‘ನಮೋ’: ಯಾವಾಗ? ಎಲ್ಲೆಲ್ಲಿ ಪ್ರಚಾರ? ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉಭಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪ್ರಧಾನಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಏ.14ರಂದು ಮಧ್ಯಾಹ್ನ 3:00 ಗಂಟೆಗೆ ಬೃಹತ್ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದ್ದು. ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬೃಹತ್ ರೋಡ್ ಶೋ ನಡೆಸಲು ಯೋಜಿಸಲಾಗಿದೆ.

ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸುವ ಯೋಜನೆ ಇದ್ದು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ರೋಡ್ ಶೋ ನಡೆಸುವ ಸಾಧ್ಯತೆ ಇದೆ. ನಮೋ ರೋಡ್‌ಶೋ ಮಾರ್ಗ ನಕ್ಷೆಯು ಇಂದು ಸಂಜೆ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!