ಸಂಸತ್‌ನಲ್ಲಿ ಮುಂದುವರಿದ ಬಿಜೆಪಿ, ಪ್ರತಿಪಕ್ಷಗಳ ಸದಸ್ಯರ ಗದ್ದಲ: 5ನೇ ದಿನವೂ ಕಲಾಪ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗಳ ಬಗ್ಗೆ ಕ್ಷಮೆಯಾಛಿಸುವಂತೆ ಪಟ್ಟು ಹಿಡಿದ ಬಿಜೆಪಿ-ಪ್ರತಿಪಕ್ಷಗಳ ಗದ್ದಲಕ್ಕೆ ಸಂಸತ್‌ ಕಲಾಪ ಸತತ ಐದನೇ ದಿನವೂ ಮುಂದೂಡಲಾಯಿತು. ಬೆಳಗ್ಗೆ 11 ಗಂಟೆಗೆ ರಾಜ್ಯಸಭೆ ಸಭೆ ಸೇರುತ್ತಿದ್ದಂತೆಯೇ ಆಡಳಿತ-ವಿಪಕ್ಷಗಳ ನಡುವೆ ಗದ್ದಲ ಉಂಟಾಗಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಹೇಳಿಕೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗಾಗಿ ರಾಹುಲ್ ಗಾಂಧಿಯವರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.ಈ ನಡುವೆ ಕಾಂಗ್ರೆಸ್‌ ಸದಸ್ಯರು ಬಿಜೆಪಿ ನಾಐಕರ ಒತ್ತಾಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಜಂಟಿ ಸಂಸದೀಯ ಸಮಿತಿಯಿಂದ ಅದಾನಿ ಗ್ರೂಪ್ ತನಿಖೆಗೆ ಒತ್ತಾಯಿಸಿ ಸರ್ಕಾರದ ವಿರುದ್ಧ ಮಾತನಾಡಲು ಪ್ರಾರಂಭಿಸಿದರು.

ಗದ್ದಲದ ನಡುವೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸದನವನ್ನು ಮಾರ್ಚ್ 20 ರಂದು ಬೆಳಿಗ್ಗೆ 11 ಗಂಟೆಗೆ ಮುಂದೂಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!