ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆಯ ಉಪಚುನಾವಣೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ(NCW) ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ರೇಖಾ ಶರ್ಮಾ ಅವರು ಹರಿಯಾಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ .
ರೇಖಾ ಶರ್ಮಾ ಅವರು ಮಂಗಳವಾರ ಹರಿಯಾಣದಿಂದ ರಾಜ್ಯಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಹೀಗಾಗಿ 3 ಗಂಟೆಯ ನಂತರ ಕಣದಲ್ಲಿದ್ದ ಏಕೈಕ ಅಭ್ಯರ್ಥಿ ರೇಖಾ ಶರ್ಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.
ಶರ್ಮಾ ಅವರು ಅವಿರೋಧವಾಗಿ ಆಯ್ಕೆಯಾದ ನಂತರ ಚುನಾವಣಾಧಿಕಾರಿ ಪ್ರಮಾಣಪತ್ರವನ್ನು ನೀಡಿದರು. ಈ ವೇಳೆ ಹರಿಯಾಣ ಸಚಿವ ಮಹಿಪಾಲ್ ಧಂಡಾ ಮತ್ತು ಹರಿಯಾಣ ವಿಧಾನಸಭೆಯ ಮಾಜಿ ಸ್ಪೀಕರ್ ಗಿಯಾನ್ ಚಂದ್ ಗುಪ್ತಾ ಅವರು ಇದ್ದರು.