ರಾಜ್ಯಸಭೆ ಚುನಾವಣೆ| ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್‌ ಜೊತೆ ನಾನು ಮಾತನಾಡಿಲ್ಲ-ಹೆಚ್‌ಡಿಕೆ ಸ್ಪಷ್ಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ರಾಜ್ಯಸಭೆ ಚುನಾವಣೆಗೆ ನಾಲ್ಕನೇ ಅಭ್ಯರ್ಥಿ ಆಯ್ಕೆ‌ವಿಚಾರದಲ್ಲಿ ಯಾವ ಕಾಂಗ್ರೆಸ್ ನಾಯಕರೊಂದಿಗೂ ನಾನು ಮಾತನಾಡಿಲ್ಲ. ಇದು ವದಂತಿ ಎಂದು ಜೆಡಿಎಸ್ ಪಕ್ಷದ ನಾಯಕ ಎಚ್.ಡಿ.‌ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಗುನ್ನಾ, ತಳಮಳ ಎಂಬ ಚರ್ಚೆಗಳು ಆಗತ್ತಾ ಇವೆ. ಆದರೆ ಯಾವುದೇ ರೀತಿಯ ತಳಮಳ, ನಡುಕ ಪಕ್ಷಕ್ಕೆ ಆಗಿಲ್ಲ. ಅದಕ್ಕಾಗಿಯೇ ನಾನು ರಾಜ್ಯಸಭಾ ಚುನಾವಣೆ ಜಂಜಾಟದಿಂದ ದೂರ ಉಳಿದಿದ್ದೆ, ಆದರೆ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವನ್ನು ಅವಮಾನ ಮಾಡಲು ಹಲವಾರು ಹೇಳಿಕೆಗಳನ್ನು ನೀಡಿದ್ದಾರೆ, ಪಕ್ಷವನ್ನು ನಿರ್ನಾಮ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ರಾಜಕಾರಣದಲ್ಲಿ ಆಶಾವಾದ ಇರಬೇಕು. ಹಾಗಾಗಿ ನಮ್ಮ ಪಕ್ಷದಿಂದ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ನಿಲ್ಲಿಸಿದ್ದೇವೆ. ನಮ್ಮಲ್ಲಿ 32 ಮತಗಳಿವೆ. 3-4 ಜನರಲ್ಲಿ ಅಸಮಾಧಾನ ಇರುವುದು ನಿಜ, ಅವರನ್ನು ವಿಶ್ವಾಸಕ್ಕೆ ಪಡೆಯುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಬಿಜೆಪಿ ಬಿ ಟೀಮ್ 10 ನೇ ತಾರೀಖಿನ ನಂತರ ಪ್ರಕಟ:

ಈವರೆಗೆ ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ ಟೀಮ್ ಎಂದು ಆರೋಪಿಸಲಾಗುತ್ತಿತ್ತು. ಆದರೆ ಬರುವ ರಾಜ್ಯಸಭೆಯ ಫಲಿತಾಂಶದ ನಂತರ ಯಾರು ಬಿಜೆಪಿಯ ಬಿ ಟೀಮ್ ಹಾಗೂ ನಾಯಕ ಯಾರೆಂದು ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!