ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ: ಸಂತಸ ವ್ಯಕ್ತಪಡಿಸಿದ ಪೇಜಾವರ ಶ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಸರ್ಕಾರವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ .‌
ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ . ನಾವು ಮಾತ್ರವಲ್ಲ, ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ.
ಶ್ರೀಯುತ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು.ಅವರಿಗೆ ಶ್ರೀಕೃಷ್ಣನ ಪೂರ್ಣಾನುಗ್ರಹವನ್ನು ಪ್ರಾರ್ಥಿಸುತ್ತೇವೆ ಎಂದು ಶ್ರೀಗಳು ಸಂದೇಶ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!