ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸಭೆ ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ರಿಂದ ಆದೇಶ ನೀಡಲಾಗಿದೆ.
ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ (Rajya Sabha Election) ಚುನಾವಣೆ ಮಂಗಳವಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.
ವಿಧಾನಭೆ ಬಲಾಬಲದ ಪ್ರಕಾರ ಕಾಂಗ್ರೆಸ್ ಮೂರು ಸ್ಥಾನ, ಬಿಜೆಪಿ ಒಂದು ಸ್ಥಾನ ಗೆಲ್ಲಲು ಸುಲಭ ಅವಕಾಶ ಇತ್ತು. ಆದರೆ ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿಯ 2ನೇ ಅಭ್ಯರ್ಥಿ ಎಂಟ್ರಿಯಿಂದ ಕಾಂಗ್ರೆಸ್ಗೆ ಈಗ ಅಡ್ಡಮತದಾನದ ಭೀತಿ ಶುರುವಾಗಿದೆ. ಮೈತ್ರಿಕೂಟದ ಅಭ್ಯರ್ಥಿ ಆಗಿರುವ ಕುಪೇಂದ್ರ ರೆಡ್ಡಿ ಎಂಟ್ರಿಯಿಂದಾಗಿ ರಾಜ್ಯಸಭೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ.