ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯಸಭಾ ಚುನಾವಣೆ ನಡೆಯಲಿದ್ದು. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸುವಲ್ಲಿ ಮುಂದಾಗಿದೆ. ಇದೀಗ ಸೋನಿಯಾ ಗಾಂಧಿ ರಾಜಸ್ಥಾನದಿಂದ ಚುನಾವಣಾ ಅಖಾಡಕ್ಕಿಳಿದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಸಮುಖದಲ್ಲಿ ಸೋನಿಯಾ ಗಾಂಧಿ ಜೈಪುರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಹಿಮಾಚಲದಿಂದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಹೆಚ್ಚುವರಿಯಾಗಿ, ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರ ಹೆಸರನ್ನು ಸಹ ಘೋಷಿಸಲಾಗಿದೆ.