Wednesday, February 28, 2024

ರಾಜ್ಯಸಭೆ ಚುನಾವಣೆ । ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್: ನಾಳೆ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದಿಂದ ಎರಡನೇ ಬಾರಿಗೆ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅಭಿನಂದಿಸಲಾಯಿತು.

ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಹೆಸರು ಪ್ರಕಟಗೊಂಡ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಸಚಿವೆ ಆಗಮಿಸಿದರು.
ವಿಧಾನಪರಿಷತ್ ಸದಸ್ಯೆ ತೇಜಸ್ವಿನಿಗೌಡ ಹಾರ ಹಾಕಿ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭ ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸತೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯ ಮುಖ್ಯ ವಕ್ತಾರ ಎಂಜಿ ಮಹೇಶ್, ಶಾಸಕ ರಾಜ್‍ಕುಮಾರ್ ಪಾಟೀಲ ತೇಲ್ಕೂರ ಹಾಗೂ ಇತರರು ಕೇಂದ್ರ ಸಚಿವರಿಗೆ ಶುಭ ಕೋರಿದರು.

ನಾಳೆ ನಾಮಪತ್ರ ಸಲ್ಲಿಕೆ :
ರಾಜ್ಯಸಭೆಗೆ ಬಿಜೆಪಿಯಿಂದ ಎರಡನೇ ಬಾರಿ ಟಿಕೆಟ್ ಪಡೆದುಕೊಂಡ ನಿರ್ಮಲಾ ಸೀತಾರಾಮನ್ ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಜೊತೆಗೆ ನಟ ಜಗ್ಗೇಶ್ ಕೂಡ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!