ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುಜರಾತ್‌ನ ರಾಜಧಾನಿ ಗಾಂಧಿನಗರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ಗುಜರಾತ್ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಅವರು ಜೈಶಂಕರ್ ಅವರೊಂದಿಗೆ ರಾಜ್ಯ ವಿಧಾನಸಭೆ ಸಂಕೀರ್ಣಕ್ಕೆ ತೆರಳಿ ಅಲ್ಲಿ ಚುನಾವಣಾಧಿಕಾರಿ ರೀಟಾ ಮೆಹ್ತಾ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಜುಲೈ 13 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಜುಲೈ 17 ಕೊನೆಯ ದಿನವಾಗಿದೆ. ಅಗತ್ಯ ಬಿದ್ದರೆ ಜುಲೈ 24 ರಂದು ಮತದಾನ ನಡೆಯಲಿದೆ.
ಕಳೆದ ವರ್ಷದ ಕೊನೆಯಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ದಾಖಲೆ ಬರೆದಿದ್ದು, ಬರೋಬ್ಬರಿ 156 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ ಕೇವಲ 17 ಸ್ಥಾನಗಳನ್ನು ಪಡೆದುಕೊಂಡಿತ್ತು.