ರಾಜ್ಯಸಭಾ ಚುನಾವಣೆ: ಮತ ಎಣಿಕೆ ಆರಂಭ, ಅಧಿಕೃತ ಫಲಿತಾಂಶಕ್ಕೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದ ನಾಲ್ಕು ರಾಜ್ಯಸಭಾ ಅಭ್ಯರ್ಥಿಗಳನ್ನು ಆರಿಸಲು ಚುನಾವಣೆ ಆರಂಭವಾಗಲಿದ್ದು, ಕ್ಷಣ ಕ್ಷಣದ ಮಾಹಿತಿ ಸಿಗಲಿದೆ.
ಶುಕ್ರವಾರ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಜೆ 5ಗಂಟೆಗೆ ಮತ ಎಣಿಕೆ ನಡೆಯಲಿದೆ. ಅಭ್ಯರ್ಥಿಗಳ ಗೆಲುವಿಗೆ ಕನಿಷ್ಠ ಮೊದಲ ಪ್ರಾಶಸ್ತ್ಯದ 45 ಮತಗಳ ಅಗತ್ಯ ಇದೆ. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಬಲ 122, ಕಾಂಗ್ರೆಸ್‌ ಶಾಸಕರ ಸಂಖ್ಯೆ 70 ಮತ್ತು ಜೆಡಿಎಸ್‌ನ ಬಲ 32 ಇದೆ. ಬಿಜೆಪಿ ಎರಡು ಮತ್ತು ಕಾಂಗ್ರೆಸ್‌ ಒಂದು ಸ್ಥಾನವನ್ನು ಸುಲಭವಾಗಿ ಜಯಗಳಿಸಲಿದೆ. ಜೆಡಿಎಸ್‌ನ ಕುಪೇಂದ್ರರೆಡ್ಡಿಗೆ ಸಂಖ್ಯಾಬಲದ ಕೊರತೆ ಇದೆ. ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಎರಡನೇ ಪ್ರಾಶಸ್ತ್ಯ ಮತ ಚಲಾವಣೆಯ ಅವಕಾಶ ಸಿಗಲಿದೆ.
ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಖಚಿತವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್‌ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್‌ ಅಲಿ ಖಾನ್‌ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!