ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್’ಗೆ ಟಿಕೆಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯಸಭಾ ಚುನಾವಣೆಯ ನಾಲ್ಕು ಸ್ಥಾನಗಳಿಗೆ ಘೋಷಣೆಯಾಗಿದ್ದ ಚುನಾವಣೆಗೆಬಿಜೆಬಿಯಿಂದ ಇಬ್ಬರು ಹೆಸರು ಅಧಿಕೃತವಾಗಿ ಘೋಷಿಸಲಾಗಿದೆ.
ರಾಜ್ಯಸಭಾ ಎರಡು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳಾಗಿ ನಟ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.
ಎರಡು ಸ್ಥಾನಗಳಿಗೆ ಬಿಜೆಪಿ, ಒಂದು ಸ್ಥಾನಗಳಿಗೆ ಕಾಂಗ್ರೆಸ್ ಫಿಕ್ಸ್ ಆಗಿದ್ದರೇ, ಮತ್ತೊಂದು ಸ್ಥಾನಕ್ಕಾಗಿ ಎರಡು ಪಕ್ಷಗಳ ದೋಸ್ತಿ ಅತ್ಯಗತ್ಯವಾಗಿದೆ. ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಮೂರೂ ಪಕ್ಷಗಳಲ್ಲಿ ಯಾವುದೇ ಬಹುಮತವಿಲ್ಲ. ಒಂದು ಪಕ್ಷ ಮತ್ತೊಂದು ಪಕ್ಷವನ್ನ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಅಭ್ಯರ್ಥಿಗಳಾಗಿ ಇಬ್ಬರಿಗೆ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿಯಿಂದ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಮತ್ತೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗೋದು ಖಚಿತಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!