ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ 10 ಸಂಘ, ಸಂಸ್ಥೆಗಳು ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದರು.
ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟರು.
ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಒಟ್ಟಾರೆಯಾಗಿ 10 ಸಂಘ-ಸಂಸ್ಥೆಗಳಿಗೆ ಸೇರಿದಂತೆ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡೋದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದರು.