ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ವಿದ್ವಾಂಸ ಪ್ರೊ.ಮಲೆಯೂರು ಗುರುಸ್ವಾಮಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯೋತ್ಸವ ಪುರಸ್ಕೃತ, ಹಿರಿಯ ವಿದ್ವಾಂಸ ಪ್ರೊ. ಮಲೆಯೂರು ಗುರುಸ್ವಾಮಿ ಅವರು ಮೈಸೂರಿನ ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಕಾರಣ ಕೆಲದಿನಗಳಿಂದ ಆಸ್ಪತ್ರೆಯಲ್ಲಿದ್ದ ಗುರುಸ್ವಾಮಿ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.ಮೊದಲು ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆಗೆ ಸ್ಪಂದಿಸಿದ್ದ ಗುರುಸ್ವಾಮಿ ಅವರ ಆರೋಗ್ಯ ಬರುಬರುತ್ತಾ ಕ್ಷೀಣಿಸಿತ್ತು.

ಇಂದು ಚಿಕಿತ್ಸೆ ಫಲಕಾರಿಯಾಗದೇ ಗುರುಸ್ವಾಮಿ ಅವರು ನಿಧನರಾಗಿದ್ದು, ಬೆಳಗ್ಗೆ ೧೦ಗಂಟೆಯಿಂದ ಮೈಸೂರಿನ ಜೆಎಸ್‌ಎಸ್ ಮಹಾವಿದ್ಯಾಪೀಠ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ ಹುಟ್ಟೂರು ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮಹಾಯಾತ್ರಿಕ, ಅಪ್ರತಿಮ ವೀರ, ಮಾತೆಂಬುದು ಜ್ಯೋತಿರ್ಲಿಂಗ ವಚನ ಸಾಹಿತ್ಯ, ಮೂಡಲ ಸೀಮೆಯ ಕಥೆಗಳು, ನದಿಯ ಎಡಬಲ ಹೀಗೆ ಸಾಕಷ್ಟು ಕೃತಿಗಳನ್ನು ರಚಿಸಿದ್ದಾರೆ.

ಷಡಕ್ಷರ ದೇವ ಸ್ಮಾರಕ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರೋಟರಿ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಇವರು ಭಾಜನರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!