Monday, November 3, 2025

2025-26ರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಅದ್ದೂರಿ ಗೌರವಕ್ಕೆ 70 ಮಹನೀಯರು ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2025-26ನೇ ಸಾಲಿನ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 70 ಮಹನೀಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಇಂದು ಸಾಧಕರ ಅಂತಿಮ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು.

ಪ್ರಸಕ್ತ ಸಾಲಿನಲ್ಲಿ ಆಯ್ಕೆಯಾದ ಪ್ರತಿಯೊಬ್ಬ ಸಾಧಕರಿಗೆ ಪ್ರಶಸ್ತಿಯು ಐದು ಲಕ್ಷ ರೂಪಾಯಿಗಳ ನಗದು ಬಹುಮಾನ ಮತ್ತು 25 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ. ಕರ್ನಾಟಕದ ಕಲೆ, ಸಂಸ್ಕೃತಿ, ಸಮಾಜ ಸೇವೆ ಮತ್ತು ಇತರ ಕ್ಷೇತ್ರಗಳಿಗೆ ಅಮೂಲ್ಯ ಕೊಡುಗೆ ನೀಡಿದವರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಈ ಮೂಲಕ ರಾಜ್ಯದ ಸಾಧಕರಿಗೆ ಸರ್ಕಾರವು ಅತ್ಯುನ್ನತ ಗೌರವ ಸಲ್ಲಿಸಿದೆ.

error: Content is protected !!