Thursday, August 18, 2022

Latest Posts

ರಾಜ್ಯೋತ್ಸವ ಆಚರಣೆಗೆ ದಿನಗಣನೆ: ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದೆ.
ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ನಾಳೆ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮ ಆಯೋಜನೆಗಾಗಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ನಿಸಾರ್ ಅಹಮ್ಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳು ನಾಳೆ ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಮೊಳಗಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!