Wednesday, October 5, 2022

Latest Posts

ಜಂತರ್ ಮಂತರ್‌ಗೆ ತೆರಳುತ್ತಿದ್ದ ರಾಕೇಶ್ ಟಿಕಾಯತ್ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪ್ರತಿಭಟನೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ಗೆ ತೆರಳುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

ಗಾಜಿಪುರದಲ್ಲಿ ರಾಕೇಶ್ ಟಿಕಾಯತ್ ಅವರನ್ನು ತಡೆದ ಪೊಲೀಸರು ವಶಕ್ಕೆ ತೆಗೆದುಕೊಂಡರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಳಿಕ ಮಧು ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದ ಹಿಂತಿರುಗುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ಆಗಿರುವ ಟಿಕಾಯತ್, ಕೃಷಿ ಕಾಯ್ದೆ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ನೇತೃತ್ವದಲ್ಲಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!