ರಾಖಿ ಸಾವಂತ್ ಗೆ ಬಲವಂತದ ಚುಂಬನ: ಗಾಯಕ ಮಿಕಾ ಸಿಂಗ್ ವಿರುದ್ಧದ ಪ್ರಕರಣ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ರಾಖಿ ಸಾವಂತ್ ಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಎಸ್ಜಿ ಡಿಗೆ ಅವರಿದ್ದ ವಿಭಾಗೀಯ ಪೀಠವು, ರಾಖಿ ಮತ್ತು ಸಿಂಗ್ ಅವರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗಿದೆ ಎಂಬ ರಾಖಿ ಸಾವಂತ್ ಅವರ ಅಫಿಡವಿಟ್ ಅನ್ನು ಗಣನೆಗೆ ತೆಗೆದುಕೊಂಡು ಪ್ರಕರಣದಲ್ಲಿ ಸಲ್ಲಿಸಲಾದ ಎಫ್ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸಿದೆ.

2006ರ ಜೂನ್ 11ರಂದು ಮುಂಬೈನ ರೆಸ್ಟೋರೆಂಟ್ನಲ್ಲಿ ರಾಖಿ ಸಾವಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮಿಕಾ ಸಿಂಗ್ ಬಲವಂತವಾಗಿ ಚುಂಬಿಸಿದ ನಂತರ ಎಫ್ಐಆರ್ ದಾಖಲಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!