Friday, July 1, 2022

Latest Posts

ಇಂದು ರಕ್ಷಾ ಬಂಧನ ಸಂಭ್ರಮ: ಸಹೋದರ ದಿ. ಸುಶಾಂತ್ ಸಿಂಗ್ ರನ್ನು ನೆನೆದ ತಂಗಿ ಶ್ವೇತಾ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡು ಒಂದು ವರ್ಷ ಕಳೆದರೂ ಸಹ ಅವರ ಕುಟುಂಬ, ಸ್ನೇಹಿತರು, ಅಭಿಮಾನಿಗಳ ನೆನಪಿನಲ್ಲಿ ಇಂದೂ ಜೀವಂತವಾಗಿದ್ದಾರೆ.
ಇಂದು ದೇಶದಲ್ಲಿ ರಕ್ಷಾ ಬಂಧನ ಸಂಭ್ರಮ, ಈ ಸಂದರ್ಭದಲ್ಲಿ ಸುಶಾಂತ್ ಸಹೋದರಿಯರಲ್ಲಿ ಒಬ್ಬರಾದ ಶ್ವೇತಾ ಸಿಂಗ್ ಕೀರ್ತಿ ತಮ್ಮ ಸಹೋದರರನ್ನು ನೆನಪಿಸಿಕೊಂಡಿದ್ದಾರೆ.
ಶ್ವೇತಾ ಸಿಂಗ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಸಹೋದರನ ಜತೆ ಇರುವ ಬಾಲ್ಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ತಮ್ಮ ಪ್ರೀತಿಯ ಅಣ್ಣನನ್ನು ನೆನೆದು ಫೋಟೋ ಪೋಸ್ಟ್ ಮಾಡಿದ್ದಾರೆ.
ಫೋಟೋದಲ್ಲಿ ಇವರಿಬ್ಬರು ಪರಸ್ಪರ ಕೈಗಳನ್ನು ಹಿಡಿದಿರುವುದನ್ನು ಕಾಣಬಹುದಾಗಿದೆ. “ಲವ್ ಯು ಅಣ್ಣ, ನಾವು ಯಾವಾಗಲೂ ಜೊತೆ ಇರುತ್ತೇವೆ” ಎಂದು ಶೀರ್ಷಿಕೆ ನೀಡಿ ಫೋಟೋ ಶೇರ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss