ಹೊಸದಿಗಂತ ಡಿಜಿಟಲ್ ಡೆಸ್ಕ್:
ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ‘ಸಪ್ತ ಸಾಗರದಾಚೆ ಎಲ್ಲೋ’ ನಾಳೆ ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ.
ಹೇಮಂತ್ ರಾವ್ ನಿರ್ದೇಶನದ ಚಿತ್ರ ಇದಾಗಿದ್ದು, ಪರಂವ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಅವರೇ ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಈ ಚಿತ್ರದ ಮತ್ತೊಂದು ಭಾಗ ಮುಂದಿನ ತಿಂಗಳು ಅಕ್ಟೋಬರ್ 20 ರಂದು ರಿಲೀಸ್ ಆಗಲಿದೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಚೈತ್ರ ಜೆ ಆಚಾರ್, ಪವಿತ್ರ ಲೋಕೇಶ್, ಅವಿನಾಶ್, ಶರತ್ ಲೋಹಿತಾಶ್ವ, ಗೋಪಾಲಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ.