spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, December 8, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೆಗಾಸ್ಟಾರ್ ಚಿರಂಜೀವಿ ಜತೆ ನಿರ್ದೇಶಕ ಪ್ರಶಾಂತ್ ನೀಲ್: ಟಾಲಿವುಡ್ ನಲ್ಲಿ ಹೊಸ ಪ್ರಾಜೆಕ್ಟ್?

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ತಮ್ಮ ನಿರ್ದೇಶನದ ಮೂಲಕ ಇಡೀ ಚಿತ್ರರಂಗವನ್ನೇ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದವರು ನಿರ್ದೇಶಕ ಪ್ರಶಾಂತ್ ನೀಲ್. ಈಗ ಟಾಲಿವುಡ್ ನ ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ತೇಜ್ ಅವರನ್ನು ಭೇಟಿ ಮಾಡುವ ಮೂಲಕ ಸಿನಿಪ್ರಿಯರಲ್ಲಿ ಕುತೂಹಲ ಹುಟ್ಟಿಹಾಕಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ತೇಜ್ ರನ್ನು ಭೇಟಿ ಮಾಡಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಪ್ರಶಾಂತ್ ನೀಲ್, ನಾನು ಲೆಜೆಂಡ್ ಚಿರಂಜೀವಿ ಅವರನ್ನು ಭೇಟಿ ಮಾಡಿದೆ. ಸುಂದರ ಸಂಜೆಯಂದು ಆತಿಥ್ಯ ನೀಡಿದ್ದಕ್ಕೆ ಧನ್ಯವಾದಗಳು. ಇವರನ್ನು ನೋಡುವ ಮೂಲಕ ನನ್ನ ಬಾಲ್ಯದ ಕನಸು ನನಸಾಗಿದೆ ಎಂದು ಮನದಾಳದ ಮಾತು ಹಂಚಿಕೊಂಡಿದ್ದಾರೆ.

ಈ ಭೇಟಿ ನಂತರ ಪ್ರಶಾಂತ್ ನೀಲ್ ಜೊತೆ ಚಿರಂಜೀವಿ ಹಾಗೂ ರಾಮ್ ಚರಣ್ ತೇಜ್ ಒಟ್ಟಾಗಿ ಸಿನಿಮಾ ಮಾಡ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲೂ ಶುರುವಾಗಿದೆ. ಈಗಾಗಲೇ ಉಗ್ರಂ, ಕೆಜಿಎಫ್ ಹಾಗೂ ಸಲಾರ್ ಚಿತ್ರಗಳು ಪ್ರಶಾಂತ್ ಅವರ ಕೈಯಲ್ಲಿದ್ದು, ಮುಂದಿನ ದಿನಗಳಲ್ಲಿ ಟಾಲಿವುಡ್ ನಲ್ಲೂ ತಮ್ಮ ನಿರ್ದೇಶನದ ಛಾಪು ಮೂಡಿಸುವ ನಿರೀಕ್ಷೆ ಇದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss