ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ಸ್ಟಾರ್ ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಮೊದಲ ಮಗುವಿನ ಆಗಮನದ ಖುಷಿಯಲಿದ್ದು, ಇಂದು ಮೂರು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಜೂನ್ 20ರಂದು ಬೆಳಗ್ಗೆ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಇದೀಗ ಉಪಾಸನಾ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹೈದರಾಬಾದ್ ಅಪೋಲೋ ಆಸ್ಪತ್ರೆಯಿಂದ ಹೊರಬಂದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ರಾಮ್ ಚರಣ್ ಮತ್ತು ಉಪಾಸನಾ ಇಬ್ಬರೂ ಪುಟ್ಟ ಕಂದಮ್ಮನನ್ನು ಎತ್ತಿಕೊಂಡು ಕುಟುಂಬದ ಜೊತೆ ಆಸ್ಪತ್ರೆಯಿಂದ ಹೊರ ಬರುತ್ತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಿವೆ.
ರಾಮ್ ಚರಣ್ ಮತ್ತು ಉಪಾಸನಾ ದಂಪತಿ 2012 ರಲ್ಲಿ ಜೂನ್ 14 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ಮದುವೆಯಾಗಿ 10 ವರ್ಷಗಳ ಬಳಿಕ ಮುದ್ದಾದ ಮಗುವಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗರ್ಭಿಣಯಾಗಿರುವ ವಿಚಾರವನ್ನು ಡಿಸೆಂಬರ್‌ನಲ್ಲಿ ಬಹಿರಂಗ ಪಡಿಸಿದ್ದರು. ಇದೀಗ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ.