CINE | ಜನ್ಮದಿನದ ಸಂಭ್ರಮದಲ್ಲಿ ರಾಮ್‌ ಚರಣ್‌ , ಪತ್ನಿ ಜೊತೆ ತಿರುಪತಿಗೆ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಮ್‌ ಚರಣ್‌ ಹಾಗೂ ಪತ್ನಿ ಉಪಾಸನಾ ಇಂದು ತಿರುಪತಿಗೆ ಭೇಟಿ ನೀಡಿದ್ದು, ದೇವರ ದರುಶನದೊಂದಿಗೆ ರಾಮ್‌ಚರಣ್‌ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಪತ್ನಿ ಜೊತೆಗೆ ಮಗಳನ್ನು ಕೂಡ ಕರೆದುಕೊಂಡು ಬಂದಿದ್ದು, ಮಾಧ್ಯಮಗಳ ಕಣ್ಣಿಗೆ ಮಗಳು ಕಾಣಿಸದಂತೆ ಉಪಾಸನ ನೋಡಿಕೊಂಡಿದ್ದಾರೆ.

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.ರಾಮ್‌ ಚರಣ್‌ ಜನ್ಮದಿನದಂದು ತಿರುಪತಿಗೆ ಭೇಟಿ ನೀಡುತ್ತಿದ್ದಾರೆ ಎನ್ನುವ ವಿಷಯ ತಿಳಿದು ಸಾಕಷ್ಟು ಅಭಿಮಾನಿಗಳು ಆಗಮಿಸಿ ಬರ್ಥ್‌ಡೇ ವಿಶಸ್‌ ಹೇಳಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!