ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಯೋಧ್ಯೆ ರೈಲ್ವೆ ಜಂಕ್ಷನ್‌ಗೆ ಮರುನಾಮಕರಣ ಮಾಡಲಾಗಿದೆ.
ಇದುವರೆಗೆ ಗುರುತಿಸಿಕೊಂಡಿದ್ದ ಅಯೋಧ್ಯಾ ಜಂಕ್ಷನ್ ಇನ್ನುಮುಂದೆ ಅಯೋಧ್ಯಾ ಧಾಮ್ ಜಂಕ್ಷನ್ ಎಂಬ ಹೆಸರಿನಲ್ಲಿ ಕರೆಯಿಸಿಕೊಳ್ಳಲಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಸಂಸದ ಲಲ್ಲು ಸಿಂಗ್, ಡಿ.30 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಅಯೋಧ್ಯೆ ರೈಲು ನಿಲ್ದಾಣವನ್ನು ‘ಅಯೋಧ್ಯಾ ಧಾಮ್’ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.
ಭಾರತದ ಗೌರವಾನ್ವಿತ ಪ್ರಧಾನಿ ನರೇಂದ್ರಮೋದಿ ಅವರ ಮಾರ್ಗದರ್ಶನದಲ್ಲಿ ಅಯೋಧ್ಯಾ ಜಂಕ್ಷನ್, ಅಯೋಧ್ಯಾ ಧಾಮ್ ಜಂಕ್ಷನ್ ಆಗಿ ಮಾರ್ಪಟ್ಟಿದೆ, ಹೊಸದಾಗಿ ನಿರ್ಮಿಸಲಾದ ಭವ್ಯವಾದ ಅಯೋಧ್ಯೆ ರೈಲು ನಿಲ್ದಾಣದ ಅಯೋಧ್ಯೆ ಜಂಕ್ಷನ್ ಹೆಸರನ್ನು ಸಾರ್ವಜನಿಕರ ನಿರೀಕ್ಷೆಯಂತೆ ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಬದಲಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.